Wednesday 6 December 2017

ನಾನು ಕೂಡ ಕಾದಂಬರಿಯ ಜೀವಂತ ಪಾತ್ರವಾದೆ - ಡಾ.ಲಕ್ಷ್ಮೀ ಜಿ ಪ್ರಸಾದ


ಲಕ್ಷ್ಮೀ ಪೊದ್ದಾರ್ c/o ಲಕ್ಷ್ಮಿ ಪ್ರಸಾದ್


ಡಾ ಕೆ ಎನ್ ಗಣೇಶಯ್ಯ ಅವರು ನಿಮಗೆ ಗೊತ್ತು.. ಅವರ ಬರವಣಿಗೆಯ ಶೈಲಿಯೂ ಗೊತ್ತು
ಕನ್ನಡಕ್ಕೆ ಹೊಸದೇ ಆದ ಬರವಣಿಗೆಯ ತಂತ್ರ ಪರಿಚಯಿಸಿದ ಹೆಮ್ಮೆ ಅವರದ್ದು
ನಾಗೇಶ್ ಹೆಗಡೆ ಅವರ ಶಹಭಾಷ್ ಗಿರಿಯಿಂದಾಗಿ ಹೊಸದೇ ಶೈಲಿಯೊಂದನ್ನು ರೂಢಿಸಿಕೊಂಡ ಗಣೇಶಯ್ಯ ಅವರು ಹೇಗೆ ಬರೆಯುತ್ತಾರೆ ಎನ್ನುವುದಕ್ಕೆ ಒಂದು ಉದಾಹರಣೆ ಇಲ್ಲಿದೆ.
ಇತ್ತೀಚಿಗೆ ಹೊರಬಂದ ‘ಬಳ್ಳಿಕಾಳ ಬಳ್ಳಿ’ ಕೃತಿಯಲ್ಲಿ ತುಳು ಸಂಸ್ಕೃತಿಯ ಸಂಶೋಧಕಿ ಡಾ ಲಕ್ಷ್ಮಿ ಜಿ ಪ್ರಸಾದ್ ಅವರ ಪಾತ್ರ ಬದಲಾಗಿರುವ ರೀತಿ ನೋಡಿ.

ಡಾ ಲಕ್ಷ್ಮಿ ಜಿ ಪ್ರಸಾದ್ ಹೇಳುತ್ತಾರೆ-
ನಾನೆಂದೂ ಕಾದಂಬರಿ ಬರೆದಿಲ್ಲ
ಆದರೆ ಖ್ಯಾತ ಸಾಹಿತಿ ಕಾದಂಬರಿಗಾರ ಕೃಷಿ ವಿಜ್ಞಾನಿ ಡಾ.ಗಣೇಶಯ್ಯ ಅವರ ಪತ್ತೆದಾರಿ ಶೈಲಿಯ ಐತಿಹಾಸಿಕ ಕಾದಂಬರಿ “ಬಳ್ಳಿ ಕಾಳ ಬಳ್ಳಿ”ಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಬಂದಿದ್ದೇನೆ
ಇಲ್ಲಿ ನನ್ನ ಪಾತ್ರ ಲಕ್ಷ್ಮೀ ಪೊದ್ದಾರ್ ಎಂಬ ತುಳು ಜಾನಪದ ಸಂಶೋಧಕಿಯದು
ನಾನು ಎಂದಾದರು ಒಂದು ದಿನ ಒಂದು ಕತೆ ಕಾದಂಬರಿಯ ಪಾತ್ರವಾಗಬಹುದು ಕನಸಲ್ಲಿ ಕೂಡ ಊಹಿಸಿರಲಿಲ್ಲ .
ನಾನು ಗಣೇಶಯ್ಯ ಅವರನ್ನು ಭೇಟಿಯಾಗಿದ್ದಾಗ ನನ್ನ ಪಾತ್ರ ಅವರ ಕಾದಂಬರಿಯಲ್ಲಿ ಬರುತ್ತೆ ಎಂದಾಗ ಒಂದೆಡೆ ತುಳುವಿನಿಂದ ಕನ್ನಡಕ್ಕೆ ಒಂದು ಪದ್ಯವನ್ನು ಅನುವಾದ ಮಾಡಿಕೊಡುವ ಚಿಕ್ಕ ಪಾತ್ರ ಇರಬಹುದು ಎಂದುಕೊಂಡಿದ್ದೆ
ಆದರೆ ಇಲ್ಲಿ ಲಕ್ಷ್ಮೀ ಪೋದ್ದಾರ್ ಗೆ ಪ್ರಮುಖ ಪಾತ್ರವಿದೆ
ನಾನು ಭೂತಾರಾಧನೆ ಬಗ್ಗೆ ಹೇಳುವ ವಿಚಾರಗಳನ್ನು ಲಕ್ಷ್ಮಿ ಪೋದ್ದಾರ್ ಮೂಲಕ ಕವಿ ಜನತೆಯ ಎದುರು ಇಟ್ಟಿದ್ದಾರೆ ಭೂತಾರಾಧನೆಯಲ್ಲಿ ಅಡಕವಾಗಿರುವ ಐತಿಹಾಸಿಕ ವಿಚಾರಗಳು ಕೂಡ ಕಾದಂಬರಿಗೆ ಆಕರವಾಗಬಲ್ಲವು ಎಂಬುದನ್ನು ಅವರು ತೋರಿಸಿಕೊಟ್ಟಿದಾರೆ.
ಅದಕ್ಕಾಗಿ ಗಣೇಶಯ್ಯ ಅವರಿಗೆ ಧನ್ಯವಾದಗಳು
ಈ ಹಿಂದೆ ಡಾ .ಅಮೃತ ಸೋಮೇಶ್ವರ ಅವರು ತುಳುವರ ಪಾಡ್ದನ ಹಾಗೂ ಭೂತಾರಾಧನೆ ಕುರಿತು ತಿಳಿಸಲು ನಾಟಕ ಕಾದಂಬರಿ ಕಥೆಗಳನ್ನು ರಚಿಸಿ ಜನರ ಮುಂದಿಡಬೇಕು ಎಂದು ಹೇಳಿದ್ದರು.
ಈಜೋ ಮಂಜೊಟ್ಟಿ ಗೋಣ ಪಾಡ್ದನ ಹಾಗೂ ಉರವ, ಎರಡು ಬಂಟ ದೈವಗಳ ಕಥಾನಕವನ್ನು ಆಧರಿಸಿ ನಾನು ಒಂದು ಸಣ್ಣ ನಾಟಕ ಬರೆದಿದ್ದು ನಮ್ಮ ವಿದ್ಯಾರ್ಥಿಗಳ ಮೂಲಕ ಪ್ರದರ್ಶನ ಮಾಡುವ ಯತ್ನ ಮಾಡಿದ್ದೆ
ಆದರೆ ಇವೆಲ್ಲ ತುಳು ಸಂಸ್ಕೃತಿ ಯ ಅರಿವಿರುವವರಿಗೆ‌ ಮಾತ್ರ ಸ್ಪಷ್ಟವಾಗಿ ಅರ್ಥವಾಗಲು ಸಾಧ್ಯ ಯಾಕೆಂದರೆ ಅಲ್ಲಿ‌ ತುಳುವಿನ ಭೂತ‌ಪದಕ್ಕೆ‌ಇರುವ ಅರ್ಥ ಆರಾಧನಾ ಸ್ವರೂಪದ ಬಗ್ಗೆ ಹೇಳಿಲ್ಲ ಬಹುಶಃ ‌ಮೊದಲ ಬಾರಿಗೆ ತುಳುನಾಡಿನ ಭೂತಾರಾಧನೆ ಬಗ್ಗೆ ಕನ್ನಡ ‌ಕಾದಂಬರಿಯಲ್ಲಿ ಈ ರೀತಿಯ ಮಾಹಿತಿಯನ್ನು ನೀಡಿದವರು ಡಾ. ಗಣೇಶಯ್ಯ ಅವರೇ ಇರಬೇಕು
ಈ ಕಾದಂಬರಿಯಲ್ಲಿ ಚೌಂಡಿ ಮತ್ತು ಜಟ್ಟಿಗ/ ಜತ್ತಿಂಗ ದೈವಗಳ ಕಥಾನದಲ್ಲಿ ಚೆನ್ನ ಭೈರಾದೇವಿಯ ಇತಿಹಾಸದ ಎಳೆಯನ್ನು ಕಂಡುಕೊಂಡದ್ದು ಅವರ ತೀವ್ರ ವಿಚಕ್ಷಣಾ ಗುಣಕ್ಕೆ ಸಾಕ್ಷಿಯಾಗಿದೆ
ಮೆಣಸಿನ ರಾಣಿ ಚೆನ್ನ ಭೈರಾದೇವಿಯ ಕುರಿತಾಗಿ ಸಾಕಷ್ಟು ಇತಿಹಾಸದ ಮಾಹಿತಿ ಇದೆ. ನಿಧಿ ಶೋಧದ ಕಥಾನಕ ಬಿಟ್ಟರೆ ಉಳಿದೆಲ್ಲವೂ ಅದರಲ್ಲಿ ಇರುವುದು ನಡೆದು ಹೋದ ಸತ್ಯ ಘಟನೆಗಳು

https://www.google.co.in/amp/avadhimag.com/%3fp=173110&amp=1

No comments:

Post a Comment